ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಪೋಸ್ಟ್ ಮಾಡಿದ್ದಾರೆ.
'ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಅವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿ ತರುತ್ತಾರೆ ಎಂಬ ನಂಬಿಕೆಯಿದೆ' ಎಂದು ಹೇಳಿದ್ದಾರೆ.
ಒಮರ್ ಅಬ್ದುಲ್ಲಾ ಅವರ ತಂದೆ ಫಾರೂಕ್ ಅಬ್ದುಲ್ಲಾ ನನ್ನ ಆಪ್ತ ಸ್ನೇಹಿತರಾಗಿದ್ದು, ಅವರಿಗೂ ಶುಭಕಾಮನೆಗಳು ಎಂದು ದೇವೇಗೌಡ ಉಲ್ಲೇಖಿಸಿದ್ದಾರೆ.
'ಜಮ್ಮು-ಕಾಶ್ಮೀರಕ್ಕೆ ದೇವರು ಆಶೀರ್ವದಿಸಲಿ. ನನ್ನ ಹೃದಯದಲ್ಲಿ ಬಹಳ ವಿಶೇಷವಾದ ಸ್ಥಾನವಿದೆ' ಎಂದು ದೇವೇಗೌಡ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.