ADVERTISEMENT

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮೇ 2024, 14:08 IST
Last Updated 10 ಮೇ 2024, 14:08 IST
<div class="paragraphs"><p>ಅರವಿಂದ ಕೇಜ್ರಿವಾಲ್‌</p></div>

ಅರವಿಂದ ಕೇಜ್ರಿವಾಲ್‌

   

– ಪಿಟಿಐ ಚಿತ್ರ

ನವದೆಹಲಿ: ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

ADVERTISEMENT

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ಬಳಿಕ ಸಂಜೆ ಜೈಲಿನಿಂದ ಕೇಜ್ರಿವಾಲ್ ಹೊರಗೆ ಬಂದರು.

ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಿಮಗೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಅವರಿಂದಾಗಿ ನಾನು ನಿಮ್ಮ ಮುಂದೆ ಇದ್ದೇನೆ’ ಎಂದು ನುಡಿದರು.

‘ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ನಾನು ಸಂಪೂರ್ಣ ಶಕ್ತಿಯಿಂದ ಹೋರಾಡುತ್ತೇನೆ. ನನಗೆ 140 ಕೋಟಿ ಜನರ ಬೆಂಬಲ ಬೇಕು’ ಎಂದು ಕೇಜ್ರಿವಾಲ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.