ನಾಸಿಕ್ : ಮಹಾರಾಷ್ಟ್ರದ ನಾಸಿಕ್ ಮೂಲದ ಆಭರಣ ಕಂಪನಿಯೊಂದರ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಸುಮಾರು ₹ 26 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
ತೆರಿಗೆ ವಂಚನೆಗೆ ಸಂಬಂಧಿಸಿದಂತೆ ದೊರೆತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋದದ ವೇಳೆ ₹26 ಕೋಟಿ ನಗದು ಮತ್ತು ಹೂಡಿಕೆಗೆ ಸಂಬಂಧಿಸಿದ ಕೆಲ ಕಾಗದ ಪತ್ರಗಳು ಪತ್ತೆಯಾಗಿವೆ. ಇವುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವಾರ ಆಗ್ರಾ ಮೂಲದ ಶೂ ವ್ಯಾಪಾರಿ ಮತ್ತು ಅವರಿಗೆ ಸಂಬಂಧಿಸಿದ ಘಟಕಗಳ ಮೇಲೆ ದಾಳಿ ನಡೆಸಿದ್ದ ಇಲಾಖೆಯು ₹ 57 ಕೋಟಿ ನಗದನ್ನು ವಶಪಡಿಸಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.