ADVERTISEMENT

ವಿಧಾನಸಭೆ ಚುನಾವಣೆ | ಮಹಾರಾಷ್ಟ್ರದಲ್ಲಿ ಬಿಜೆಪಿ ನಾಶವಾಗಲಿದೆ: ಸತ್ಯಪಾಲ್ ಮಲಿಕ್

ಪಿಟಿಐ
Published 22 ಸೆಪ್ಟೆಂಬರ್ 2024, 7:46 IST
Last Updated 22 ಸೆಪ್ಟೆಂಬರ್ 2024, 7:46 IST
<div class="paragraphs"><p>ಸತ್ಯಪಾಲ್ ಮಲಿಕ್ </p></div>

ಸತ್ಯಪಾಲ್ ಮಲಿಕ್

   

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟದ ಪರ ಪ್ರಚಾರ ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ನಾಶವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್‌ ಸತ್ಯಪಾಲ್ ಮಲಿಕ್‌ ಭಾನುವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370 ವಿಧಿ ಅಡಿಯಲ್ಲಿ ಕಲ್ಪಿಸಲಾಗಿದ್ದ 'ವಿಶೇಷ ಸ್ಥಾನಮಾನ'ವನ್ನು ಕೇಂದ್ರ ಸರ್ಕಾರವು 2019ರ ಆಗಸ್ಟ್‌ನಲ್ಲಿ ಹಿಂಪಡೆಯುವಲ್ಲಿ ಮಲಿಕ್‌ ಪ್ರಮುಖ ಪಾತ್ರ ವಹಿಸಿದ್ದರು.

ADVERTISEMENT

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾದ್ಯತೆ ಇದೆ.

ಕಾಂಗ್ರೆಸ್‌, ಉದ್ಧವ್ ಠಾಕ್ರೆ ಅವರ ಶಿವಸೇನಾ–ಯುಬಿಟಿ ಹಾಗೂ ಶರದ್‌ ಪವರ್‌ ಅವರ ಎನ್‌ಸಿಪಿ–ಎಸ್‌ಪಿ 'ಎಂವಿಎ' ಮೈತ್ರಿಕೂಟದಲ್ಲಿವೆ.

ಆಡಳಿತಾರೂಢ 'ಮಹಾಯುತಿ' ಸರ್ಕಾರದಲ್ಲಿ ಬಿಜೆಪಿ, ಶಿವಸೇನಾ ಮತ್ತು ಎನ್‌ಸಿಪಿ ಪಕ್ಷಗಳಿವೆ.

ಶಿವಸೇನಾ (ಯುಬಿಟಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಮಲಿಕ್ ಮಾತನಾಡಿದ್ದಾರೆ.

ಚುನಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಮಹಾರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಹಿನ್ನಡೆ ಅನುಭವಿಸುವುದಷ್ಟೇ ಅಲ್ಲ, ನಾಶವಾಗಲಿದೆ. ಚುನಾವಣೆಯಲ್ಲಿ ಉದ್ಧವ್‌ ಠಾಕ್ರೆ ಪ್ರಮುಖ ಪಾತ್ರವಹಿಸಲಿದ್ದಾರೆ. ನೀವು ಚಿಂತಿಸಬೇಕಿಲ್ಲ' ಎಂದು ಹೇಳಿದ್ದಾರೆ.

'ಎಂವಿಎಗೆ ಸಂಪೂರ್ಣ ಬೆಂಬಲ ನೀಡಲಿದ್ದೇನೆ. ಅದರ ಪರ ಪ್ರಚಾರವನ್ನೂ ಮಾಡಲಿದ್ದೇನೆ' ಎಂದಿದ್ದಾರೆ.

'ಮಹಾರಾಷ್ಟ್ರ ಚುನಾವಣೆಯು ರಾಷ್ಟ್ರದ ರಾಜಕೀಯದ ಮೇಲೆ ಪರಿಣಾಮ ಉಂಟುಮಾಡಲಿದೆ. ರಾಜ್ಯದ ಚುನಾವಣಾ ಫಲಿತಾಂಶವು ಬಿಜೆಪಿಯ ಶವ ಪೆಟ್ಟಿಗೆಗೆ ಕೊನೇ ಮೊಳೆಯಾಗಲಿದೆ' ಎಂದು ಶನಿವಾರ ಅಭಿಪ್ರಾಯಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.