ADVERTISEMENT

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ, MSP ಕಾಯ್ದೆ ಜಾರಿಗೆ ಆದ್ಯತೆ: ರಾಹುಲ್

ಪಿಟಿಐ
Published 6 ಮಾರ್ಚ್ 2024, 13:36 IST
Last Updated 6 ಮಾರ್ಚ್ 2024, 13:36 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಪಿಟಿಐ ಚಿತ್ರ

ಬದ್ನಾವರ್( ಮಧ್ಯಪ್ರದೇಶ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ( ಎಂಎಸ್‌ಪಿ) ಕಾಯ್ದೆ ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಹೇಳಿದ್ದಾರೆ.

ADVERTISEMENT

ಭಾರತ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿಯು ಹಸಿರು ಹಾಗೂ ಶ್ವೇತ ಕ್ರಾಂತಿಯಷ್ಟೇ ದೊಡ್ಡ ಕಾಂತ್ರಿಕಾರಿ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.

ಜಾತಿ ಗಣತಿಯು ದೇಶದಲ್ಲಿರುವ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಬಗ್ಗೆ ನಿಖರವಾದ ಮಾಹಿತಿ ಒದಗಿಸುತ್ತದೆ. ಈ ಮೂಲಕ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ನ್ಯಾಯ ಒದಗಿಸಲು ಕಾಂಗ್ರೆಸ್‌ ಬದ್ಧವಾಗಿದೆ ಎಂದು ರಾಹುಲ್‌ ಹೇಳಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದು ಹರಿಯಾಣ ಮತ್ತು ಪಂಜಾಬ್‌ನ ರೈತರ ಏಕೈಕ ಬೇಡಿಕೆಯಾಗಿದೆ. ಕಾಂಗ್ರೆಸ್‌ ರೈತರ ಪರ ಸದಾ ನಿಲ್ಲುತ್ತದೆ ಎಂದು ರಾಹುಲ್ ಪುನರುಚ್ಚರಿಸಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರವು ಸುಮಾರು 100 ಕೈಗಾರಿಕೋದ್ಯಮಿಗಳ ₹16 ಲಕ್ಷ ಕೋಟಿಯಷ್ಟು ಸಾಲ ಮನ್ನಾ ಮಾಡಿದೆ. ಈ ಮೊತ್ತ 24 ವರ್ಷಗಳ ಎಂಎನ್‌ಆರ್‌ಇಜಿಎ ಬಜೆಟ್‌ನ ಗಾತ್ರದಷ್ಟಿದೆ. ಆದರೆ ರೈತರಿಗೆ ಎಂಎಸ್‌ಪಿ ಕಾಯ್ದೆ ಜಾರಿಗೆ ತರಲು ಹಿಂದೇಟು ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನೀವು ನಮ್ಮೊಂದಿಗೆ ನಿಂತು ನಮ್ಮನ್ನು ಬೆಂಬಲಿಸಿದಂತೆ, ನಾವು (ಕಾಂಗ್ರೆಸ್‌) ನಿಮ್ಮೊಂದಿಗೆ ನಿಂತು ನೆಲ, ಜಲ, ನಾಡಿನ ವಿಚಾರಗಳಲ್ಲಿ ಹೋರಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.