ADVERTISEMENT

ಪೇರರಿವಾಳನ್ ಭೇಟಿ ಮಾಡಿದ ಸ್ಟಾಲಿನ್: ನಮ್ಮ ಸಂಸ್ಕೃತಿಯಲ್ಲ ಎಂದ ಸಂಜಯ್ ರಾವುತ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಮೇ 2022, 7:45 IST
Last Updated 25 ಮೇ 2022, 7:45 IST
ಪೇರರಿವಾಳನ್ ಭೇಟಿ ಮಾಡಿದ ಸ್ಟಾಲಿನ್ – ಪಿಟಿಐ ಚಿತ್ರ
ಪೇರರಿವಾಳನ್ ಭೇಟಿ ಮಾಡಿದ ಸ್ಟಾಲಿನ್ – ಪಿಟಿಐ ಚಿತ್ರ   

ಮುಂಬೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್ ಅವರನ್ನು ಭೇಟಿ ಮಾಡಿರುವುದಕ್ಕೆ ಶಿವಸೇನಾ ನಾಯಕ ಸಂಜಯ್ ರಾವುತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ರಾಜಕೀಯದ ಬಗ್ಗೆ ಎಲ್ಲರಿಗೂ ಗೊತ್ತಿದೆ. ರಾಜೀವ್ ಗಾಂಧಿ ಅವರು ರಾಷ್ಟ್ರಮಟ್ಟದ ನಾಯಕರಾಗಿದ್ದರು. ಅವರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದರು. ಅವರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಹತ್ಯೆ ಪ್ರಕರಣದ ಅಪರಾಧಿಗಳನ್ನು ತಮಿಳುನಾಡು ಮುಖ್ಯಮಂತ್ರಿ ಅಭಿನಂದಿಸುತ್ತಾರೆ ಎಂದಾದರೆ, ಇದು ನಮ್ಮ ಸಂಸ್ಕೃತಿ ಅಲ್ಲವೆಂದು ಭಾವಿಸುತ್ತೇನೆ ಎಂದು ರಾವುತ್ ಹೇಳಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಯಾರಾದರೂ ಈ ರೀತಿ ಹೊಸ ಆಯಾಮ ಸೃಷ್ಟಿಸಿದರೆ ಅದು ದೇಶಕ್ಕೆ ಸರಿಯಾದ ಆದರ್ಶವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎ.ಜಿ.ಪೇರರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಳೆದ ಬುಧವಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.