ಕಾನ್ಪುರ: ಕಾನ್ಪುರ ಐಐಟಿಯ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಕಾನ್ಪುರ ಐಐಟಿ ಕ್ಯಾಂಪಸ್‌ನಲ್ಲಿ ಇದು ಮೂರನೇ ಪ್ರಕರಣವಾಗಿದೆ.
ಮೃತ ವಿದ್ಯಾರ್ಥಿನಿ ಜಾರ್ಖಂಡ್‌ನ ಪ್ರಿಯಾಂಕಾ ಜೈಸ್ವಾಲ್ (29) ಎಂದು ಗುರುತಿಸಲಾಗಿದೆ. ಕೆಮಿಕಲ್ ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಅಧ್ಯಯನಕ್ಕಾಗಿ ಕಳೆದ ವರ್ಷ ಪ್ರವೇಶ ಪಡೆದಿದ್ದರು ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.
‘ಇಂದು( ಗುರುವಾರ) ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಮಾಹಿತಿ ದೊರೆಯಿತು. ಪೊಲೀಸರು ಸ್ಥಳಕ್ಕೆ ತೆರಳಿದಾಗ ಜೈಸ್ವಾಲ್ ಕೊಠಡಿಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಒಳಗೆ ಹೋಗಿ ನೋಡಿದಾಗ ನೇಣು ಬೀಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ’ ಎಂದು ಡಿಸಿಪಿ ಆಕಾಶ್ ಪಟೇಲ್ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವು ಬಂದಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಪಟೇಲ್ ತಿಳಿಸಿದ್ದಾರೆ.
ಜನವರಿ 11ರಂದು ಎಂ.ಟೆಕ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವಿಕಾಸ್ ಕುಮಾರ್ ಮೀನಾ (31) ಆತ್ಮಹತ್ಯೆ ಮಾಡಿಕೊಂಡಿದ್ದರು. ಡಿಸೆಂಬರ್ 19ರಂದು ಪಲ್ಲವಿ ಚಿಲ್ಕಾ (34) ಅವರೂ ಸಹ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.