ADVERTISEMENT

ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ: ಐಎಂಡಿ

ಪಿಟಿಐ
Published 13 ಜುಲೈ 2024, 11:28 IST
Last Updated 13 ಜುಲೈ 2024, 11:28 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ಮುಂಬೈ: ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಾದ ರಾಯಗಢ, ರತ್ನಗಿರಿ ಸೇರಿದಂತೆ ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಿಗೆ ಇಂದು (ಶನಿವಾರ) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ನಾಳೆ (ಜೂನ್ 14) ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣ ಹಾಗೂ ಹಲವು ಕಡೆ ಭಾರಿ ಮಳೆಯಾಗಲಿದೆ ಮುನ್ಸೂಚನೆ ನೀಡಿದೆ.

ADVERTISEMENT

ಮುಂಬೈಗೆ ಯೆಲ್ಲೊ ಅಲರ್ಟ್‌ ಹಾಗೂ ಥಾಣೆಗೆ ಆರಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಳಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ಹೇಳಿದೆ.

ಜುಲೈ 11ರಿಂದ ಮುಂಗಾರು ಚುರುಕುಗೊಂಡಿದ್ದು, ಎರಡು ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ವಿಜ್ಞಾನಿ ಸುಷ್ಮಾ ನಾಯರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.