ADVERTISEMENT

ಭಾರಿ ಮಳೆ ಸಾಧ್ಯತೆ: ಕೇರಳದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಪಿಟಿಐ
Published 10 ಅಕ್ಟೋಬರ್ 2024, 11:00 IST
Last Updated 10 ಅಕ್ಟೋಬರ್ 2024, 11:00 IST
<div class="paragraphs"><p>ಮಳೆ&nbsp;</p></div>

ಮಳೆ 

   

ತಿರುವನಂತಪುರ: ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೇರಳದ 8 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದ ದಕ್ಷಿಣ ಜಿಲ್ಲೆಗಳಾದ ತಿರುವನಂತಪುರ, ಕೊಲ್ಲಂ ಮತ್ತು ಪತ್ತನಂತಿಟ್ಟ ಮತ್ತು ಉತ್ತರ ಜಿಲ್ಲೆಗಳಾದ ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ಭೂಕುಸಿತ, ಮಣ್ಣು ಕುಸಿತ ಹಾಗೂ ಹಠಾತ್ ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳಲ್ಲಿ ವಾಸಿಸುವ ಜನರು, ಅಧಿಕಾರಿಗಳ ಸೂಚನೆಯಂತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಅಲ್ಲದೇ ನದಿ ದಡ ಮತ್ತು ಅಣೆಕಟ್ಟುಗಳ ತಗ್ಗು ಪ್ರದೇಶಗಳ ಬಳಿ ವಾಸಿಸುವ ಜನರು ಸಂಭಾವ್ಯ ಅಪಾಯ ಕಾರಣ ಅಧಿಕಾರಿಗಳ ನಿರ್ದೇಶನದಂತೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.