ADVERTISEMENT

ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಪಿಟಿಐ
Published 22 ಜೂನ್ 2024, 10:12 IST
Last Updated 22 ಜೂನ್ 2024, 10:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತಿರುವನಂತಪುರ: ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಶನಿವಾರ ರಾಜ್ಯದ 7 ಜಿಲ್ಲೆಗಳಲ್ಲಿ (ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು) ಆರೆಂಜ್ ಅಲರ್ಟ್ ಹಾಗೂ ಮಲಪ್ಪುರಂ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ADVERTISEMENT

ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಭಾಗದಲ್ಲಿ 20 ಸೆಂ.ಮೀ. ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.