ಮುಂಬೈ: ‘ಅವರು (ಮಹಾ ವಿಕಾಸ ಅಘಾಡಿ) ನಮ್ಮನ್ನು ಮೈತ್ರಿಯಲ್ಲಿ ಉಳಿಸಿಕೊಳ್ಳದಿದ್ದರೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಮೊದಲಿಗೆ ಎಂವಿಎ ಜತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಿದ್ದೇವೆ. ಅವರು(ಎಂವಿಎ) ನಮ್ಮನ್ನು ಮೈತ್ರಿಯಲ್ಲಿ ಉಳಿಸಿಕೊಳ್ಳದಿದ್ದರೆ, ನಮ್ಮ ಪಕ್ಷ ಪ್ರಬಲವಾಗಿರುವ ಕಡೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ. ನಮ್ಮ ಸ್ಪರ್ಧೆಯಿಂದ ಮೈತ್ರಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ. ರಾಜಕೀಯದಲ್ಲಿ ತ್ಯಾಗಕ್ಕೆ ಜಾಗವಿಲ್ಲ’ ಎಂದು ಹೇಳಿದರು.
‘ಬಿಜೆಪಿ ತನ್ನ ಕಾರ್ಯಕರ್ತರ ಮೂಲಕ ಚುನಾವಣೆ ಎದುರಿಸುತ್ತಿಲ್ಲ, ಅಧಿಕಾರಿಗಳ ಮೂಲಕ ಹೋರಾಟ ನಡೆಸುತ್ತಿದೆ’ ಎಂದು ಇದೇ ವೇಳೆ ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.