ನವದೆಹಲಿ: ಟ್ರ್ಯಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘವು(ಆರ್‌ಎಸ್‌ಎಸ್), ಕೆಂಪುಕೋಟೆಯಲ್ಲಿ ನಡೆದ ‘ದುರದೃಷ್ಟಕರ ವರ್ತನೆಯು’, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಅರ್ಪಿಸಿದವರಿಗೆ ಮಾಡಿದ ಅವಮಾನ ಎಂದು ಟೀಕಿಸಿದೆ.
‘ಪವಿತ್ರವಾದ ಗಣರಾಜ್ಯೋತ್ಸವ ದಿನದಂದು, ದೆಹಲಿಯಲ್ಲಿ ನಡೆದ ಹಿಂಸೆ ಹಾಗೂ ಘರ್ಷಣೆ ವಿಷಾದನೀಯ’ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಪ್ರಕಟಣೆಯಲ್ಲಿ ಹೇಳಿದ್ದಾರೆ.ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲಾಗಿ ಅನ್ಯ ಧ್ವಜವನ್ನು ಹಾರಿಸುವುದು ದುರದೃಷ್ಟಕರ ವರ್ತನೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ದೇಶದ ಎಲ್ಲ ಜನರೂ ರಾಜಕೀಯ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೊರಬಂದು, ಶಾಂತಿಗೆ ಆದ್ಯತೆ ನೀಡಬೇಕು ಎಂದು ಆರ್‌ಎಸ್‌ಎಸ್ ಹೇಳಿದೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.