ತಿರುವನಂತಪುರ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೇಲೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿರ್ಬಂಧ ವಿರೋಧಿಸಿ 12 ದಿನಗಳಿಂದ ನಡೆಸುತ್ತಿದ್ದ ಸತ್ಯಾಗ್ರಹವನ್ನು ಪ್ರತಿಭಟನಕಾರರು ಭಾನುವಾರ ಕೈಬಿಟ್ಟಿದ್ದಾರೆ.
ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಯಾವುದೇ ನಿಲುವು ತೆಗೆದುಕೊಂಡರೂ ಕೇರಳ ಸರ್ಕಾರ ಮಧ್ಯಪ್ರವೇಶಿಸಲಿದೆ ಎಂದು ಕೇರಳ ಸಾರಿಗೆ ಸಚಿವ ಎ.ಕೆ.ಶಶಿಧರನ್ ಅವರು ಪ್ರತಿಭಟನಕಾರರಿಗೆ ಮನವರಿಕೆ ಮಾಡಿಕೊಟ್ಟರು. ಒಮ್ಮತದ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರದ ಜೊತೆ ಚರ್ಚೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.