ADVERTISEMENT

ಕಾಂಗ್ರೆಸ್‌ಗೆ ಬೆಂಬಲ ನೀಡಿದ ಮಹಾರಾಷ್ಟ್ರದ ಪಕ್ಷೇತರ ಸಂಸದ ವಿಶಾಲ್ ಪಾಟೀಲ್

ಪಿಟಿಐ
Published 6 ಜೂನ್ 2024, 13:20 IST
Last Updated 6 ಜೂನ್ 2024, 13:20 IST
<div class="paragraphs"><p>ಕಾಂಗ್ರೆಸ್‌ಗೆ ಬೆಂಬಲ ನೀಡಿದ&nbsp;ಪಕ್ಷೇತರ ಸಂಸದ ವಿಶಾಲ್ ಪಾಟೀಲ್</p></div>

ಕಾಂಗ್ರೆಸ್‌ಗೆ ಬೆಂಬಲ ನೀಡಿದ ಪಕ್ಷೇತರ ಸಂಸದ ವಿಶಾಲ್ ಪಾಟೀಲ್

   

(ಚಿತ್ರ ಕೃಪೆ– @kharge)

ನವದೆಹಲಿ: ಮಹಾರಾಷ್ಟ್ರದ ಪಕ್ಷೇತರ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ADVERTISEMENT

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತದಾದಾ ಪಾಟೀಲ್ ಅವರ ಮೊಮ್ಮಗ ವಿಶಾಲ್ ಪಾಟೀಲ್ ಅವರು ಸಾಂಗ್ಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಸಾಂಗ್ಲಿ ಸಂಸದೀಯ ಸ್ಥಾನವನ್ನು ಶಿವಸೇನಾ-ಯುಬಿಟಿಗೆ ಹಂಚಿಕೆ ಮಾಡಿದ ಬಳಿಕ ಕಾಂಗ್ರೆಸ್ ಮಾಜಿ ನಾಯಕ, ಪಾಟೀಲ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

'ಸಾಂಗ್ಲಿಯಿಂದ ಚುನಾಯಿತ ಸಂಸದರಾದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ' ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 293 ಸ್ಥಾನಗಳನ್ನು ಗೆದ್ದಿರುವ ಎನ್‌ಡಿಎ ಮೈತ್ರಿ ಕೂಟ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.