ನವದೆಹಲಿ: 2030ರ ವೇಳೆಗೆ ಶೂನ್ಯ ರಸ್ತೆ ಅಪಘಾತಗಳನ್ನು ಸಾಧಿಸಲು ಭಾರತವು ಶ್ರಮಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದ್ದಾರೆ.
ಇಂಡೊ–ಆಸ್ಟ್ರೇಲಿಯನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆಗಳ ನವೀಕರಣವು ಶೇ 50ರಷ್ಟು ಅಪಘಾತವನ್ನು ತಪ್ಪಿಸಬಲ್ಲವು. 2030ರ ವೇಳೆಗೆ ಶೂನ್ಯ ರಸ್ತೆ ಅಪಘಾತಗಳನ್ನು ಸಾಧಿಸುವ ಗುರಿಯನ್ನು ಭಾರತ ಹೊಂದಿದೆ ಎಂದರು.
2018ರಲ್ಲಿ ವಿಶ್ವದಲ್ಲಿಯೇ ಅತಿಹೆಚ್ಚು ರಸ್ತೆ ಅಪಘಾತಗಳು ಭಾರತದಲ್ಲಿ ವರದಿಯಾಗಿವೆ. 2018ರಲ್ಲಿ 4.67ಲಕ್ಷ ಅಪಘಾತಗಳು ಸಂಭವಿಸಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.