ADVERTISEMENT

‘ಇಂಡಿಯಾ’ ಮೈತ್ರಿಕೂಟ ಸಭೆ ಆರಂಭ: ಖರ್ಗೆ ನಿವಾಸಕ್ಕೆ ಕೇಜ್ರಿವಾಲ್, ತೇಜಸ್ವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2024, 10:48 IST
Last Updated 1 ಜೂನ್ 2024, 10:48 IST
<div class="paragraphs"><p>‘ಇಂಡಿಯಾ’ ಮೈತ್ರಿಕೂಟ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದಾರೆ.</p></div>

‘ಇಂಡಿಯಾ’ ಮೈತ್ರಿಕೂಟ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದಾರೆ.

   

ಸಾಮಾಜಿಕ ಜಾಲತಾಣ ಎಕ್ಸ್

ನವದೆಹಲಿ: 'ಇಂಡಿಯಾ' ಮೈತ್ರಿಕೂಟ ಪಕ್ಷಗಳ ಸಭೆಯು ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಆರಂಭವಾಗಿದೆ.

ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್‌ ಅವರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ.

‘ನನ್ನ ತಾಯಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಸಭೆಗೆ ಹಾಜರಾಗಲು ಸಾಧ್ಯವಿಲ್ಲ‘ ಎಂದು ಮೆಹಬೂಬಾ ಮುಫ್ತಿ ‘ಪಿಟಿಐ‘ಗೆ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಇಂದು ಅಂತಿಮ ಹಂತದ ಮತದಾನ ಮುಕ್ತಾಯವಾಗಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮೊದಲು ಮೈತ್ರಿಕೂಟದ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಸಭೆ ಆಯೋಜಿಸಲಾಗಿದೆ.

ಜನರು ಬದಲಾವಣೆ ಬಯಸುತ್ತಿದ್ದಾರೆ. ಇಂಡಿಯಾ ಮೈತ್ರಕೂಟ ಅಧಿಕಾರಕ್ಕೆ ಬರುತ್ತದೆ ಎನಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಮೇಶ್‌ ಚೆನ್ನಿತಲ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.