ನವದೆಹಲಿ: ಟಿಕ್‌ಟಾಕ್ ಲೈಟ್, ಹೆಲೊ ಲೈಟ್, ಶೇರ್‌ಇಟ್ ಲೈಟ್, ಬಿಗೊ ಲೈವ್ ಲೈಟ್, ವಿಎಫ್‌ವೈ ಲೈಟ್ಸೇರಿದಂತೆ ಚೀನಾದ 47 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ಸೋಮವಾರನಿಷೇಧ ಹೇರಿದೆ.
ಚೀನಾದ 59 ಆ್ಯಪ್‌ಗಳ ಮೇಲೆ ಜೂನ್‌ನಲ್ಲಿ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು. ಆ ಆ್ಯಪ್‌ಗಳದ್ದೇ ಮಾದರಿಯ ಮತ್ತಷ್ಟು ಆ್ಯಪ್‌ಗಳನ್ನು ಇದೀಗ ನಿಷೇಧಿಸಿದೆ.
ಟಿಕ್‌ಟಾಕ್, ಶೇರ್‌ಇಟ್, ಹೆಲೊ, ಲೀಕೀ, ಯುಸಿ ಬ್ರೌಸರ್ ಮತ್ತು ವಿ–ಚಾಟ್ ಸೇರಿದಂತೆ 59 ಮೊಬೈಲ್ ಆ್ಯಪ್‌ಗಳ ಮೇಲೆ ಜೂನ್ 30ರಂದು ನಿಷೇಧ ಹೇರಲಾಗಿತ್ತು. ‘ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುತಿದ್ದ ಕಾರಣ ಇವುಗಳನ್ನು ನಿಷೇಧಿಸಲಾಗಿದೆ’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೇಳಿತ್ತು. ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನೆ ಜತೆ ನಡೆದ ಸಂಘರ್ಷದ ಬಳಿಕ ಸರ್ಕಾರ ಈ ಕ್ರಮ ಕೈಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.