ಸುಲ್ತಾನ್‌ಪುರ (ಉತ್ತರ ಪ್ರದೇಶ): ‘ವಿರೋಧಿ ಶಕ್ತಿಗಳ ತೀವ್ರ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್ಎಸ್) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶನಿವಾರ ಇಲ್ಲಿ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಯುವ ಸಮೂಹಕ್ಕೆ ದೇಶದ ಇತಿಹಾಸ, ಸಂಸ್ಕೃತಿ, ಪರಂಪರೆಯನ್ನು ತಿಳಿಸಬೇಕಿದೆ. ಇದರಿಂದ ಸ್ಫೂರ್ತಿ ಪಡೆದು ಅವರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು’ ಎಂದರು.
‘ದೇಶವೊಂದು ಎಷ್ಟೇ ಸಂಪದ್ಭರಿತ ನೈಸರ್ಗಿಕ ಸಂಪನ್ಮೂಲ, ಐತಿಹಾಸಿಕ ಚರಿತ್ರೆ ಹೊಂದಿದ್ದರೂ; ಅಲ್ಲಿ ವಾಸಿಸುವ ಜನರು ಸಮಾಜಕ್ಕೆ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸದಿದ್ದರೆ, ಎಂದಿಗೂ ಆ ರಾಷ್ಟ್ರ ಪ್ರಗತಿ ಹೊಂದಲು ಸಾಧ್ಯವಿಲ್ಲ’ ಎಂದು ಹೊಸಬಾಳೆ ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.