ADVERTISEMENT

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ:ಅಖಿಲೇಶ್

ಪಿಟಿಐ
Published 4 ಮೇ 2024, 14:12 IST
Last Updated 4 ಮೇ 2024, 14:12 IST
<div class="paragraphs"><p>ಎಸ್‌ಪಿ ನಾಯಕ ಅಖಿಲೇಶ್ ಯಾದವ್</p></div>

ಎಸ್‌ಪಿ ನಾಯಕ ಅಖಿಲೇಶ್ ಯಾದವ್

   

ಬದೌನ್‌ (ಉತ್ತರ ಪ್ರದೇಶ): ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ರೈತರ ಸಾಲ ಮನ್ನಾ ಮಾಡುವುದೇ ಸರ್ಕಾರದ ಮೊದಲ ನಿರ್ಧಾರವಾಗಿರುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ರೈತರನ್ನು ವಂಚಿಸಿದೆ. ದೊಡ್ಡ ಕೈಗಾರಿಕೋದ್ಯಮಿಗಳ ಸುಮಾರು ₹16 ಸಾವಿರ ಕೋಟಿ ಸಾಲವನ್ನು ಬಿಜೆಪಿ ಮನ್ನಾ ಮಾಡಿದೆ. ಆದರೆ, ರೈತರ ಸಾಲವನ್ನು ಮನ್ನಾ ಮಾಡಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಜೂನ್‌ 4ರಂದು ಚುನಾವಣೆ ಫಲಿತಾಂಶ ಬರಲಿದೆ. ಸರ್ಕಾರ ರಚಿಸಿದ ಬಳಿಕ ಸಮಾಜವಾದಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ಮೊದಲ ನಿರ್ಧಾರ ದೇಶದಾದ್ಯಂತ ಇರುವ ರೈತರ ಸಾಲವನ್ನು ಮನ್ನಾ ಮಾಡುವುದಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

2022ರ ಹೊತ್ತಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುವುದು ಎಂದು ಬಿಜೆಪಿ ಹೇಳಿತ್ತು. ಆದರೆ, ರೈತರ ಆದಾಯ ದ್ವಿಗುಣಗೊಂಡಿಲ್ಲ ಬದಲಾಗಿ ಎಲ್ಲಾ ವಸ್ತುಗಳ ಬೆಲೆ ದುಬಾರಿಯಾಗಿದೆ. ಅಲ್ಲದೆ, ದೇಶದ ಯುವಕರಿಗೆ ಉದ್ಯೋಗ ನೀಡದೆ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬದೌನ್‌ ಮತ್ತು ಫಿರೋಜಾಬಾದ್‌ ಕ್ಷೇತ್ರಗಳಿಗೆ ಮೇ 7ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಬದೌನ್‌ ಕ್ಷೇತ್ರದಿಂದ ಪಕ್ಷದ ಹಿರಿಯ ನಾಯಕ ಶಿವಪಾಲ್‌ ಯಾದವ್‌ ಅವರ ಪುತ್ರ ಆದಿತ್ಯ ಯಾದವ್‌ ಅವರನ್ನು ಎಸ್‌ಪಿ ಕಣಕ್ಕಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.