ADVERTISEMENT

ಲೋಕಸಭೆ ಚುನಾವಣೆಗೆ ಕಾರ್ಯತಂತ್ರ: ಡಿ.6ಕ್ಕೆ ಖರ್ಗೆ ಮನೆಯಲ್ಲಿ ಇಂಡಿಯಾ ಸಭೆ

ಪಿಟಿಐ
Published 3 ಡಿಸೆಂಬರ್ 2023, 6:27 IST
Last Updated 3 ಡಿಸೆಂಬರ್ 2023, 6:27 IST
ಮಲ್ಲಿಕಾರ್ಜುನ ಖರ್ಗೆ 
ಮಲ್ಲಿಕಾರ್ಜುನ ಖರ್ಗೆ    

ನವದೆಹಲಿ: 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಡಿಸೆಂಬರ್ 6ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ಸಭೆ ಸೇರಿ ಮುಂದಿನ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಇಂಡಿಯಾ ಬಣದ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಾಗಿ ಎದುರಿಸುವ ಕುರಿತಂತೆ ನಾಯಕರು ಯೋಜನೆಯನ್ನು ಅಂತಿಮಗೊಳಿಸಲಿದ್ದಾರೆ. ತಮ್ಮ ರಣತಂತ್ರ ಅಂತಿಮಗೊಳಿಸಲು ಕಾಂಗ್ರೆಸ್ 5 ರಾಜ್ಯಗಳ ಫಲಿತಾಂಶಕ್ಕೆ ಕಾಯುತ್ತಿದೆ ಎಂದು ಮೂಲಗಳು ಹೇಳಿವೆ.

ಇಂಡಿಯಾ ಬಣದಲ್ಲಿ ಬಿಜೆಪಿ ವಿರುದ್ಧ 28 ಪಕ್ಷಗಳು ಒಗ್ಗೂಡಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದು ಈ ಬಣದ ಪ್ರಮುಖ ಗುರಿಯಾಗಿದೆ.

ADVERTISEMENT

ಇಂಡಿಯಾ ಬಣದ ನಾಯಕರು ದೇಶದ ವಿವಿಧೆಡೆ ಜಂಟಿ ರ್‍ಯಾಲಿಗೆ ಸಿದ್ಧತೆ ನಡೆಸಿದ್ದರು. ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅದಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಸೀಟು ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಬೇಕಿದೆ ಎಂದು ಮೂಲಗಳು ತಿಳಿಸಿವೆ.

ಇಂದು ನಡೆಯುತ್ತಿರುವ 4 ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ, ಬೆಳಿಗ್ಗೆ 11 ಗಂಟೆ ಟ್ರೆಂಡ್ ಪ್ರಕಾರ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ., ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟಬಹುಮತದತ್ತ ದಾಪುಗಾಲಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.