ADVERTISEMENT

‘ಇಂಡಿಯಾ’ ಅಧಿಕಾರಕ್ಕೆ ಬಂದ 48 ಗಂಟೆಯಲ್ಲಿ ಹೊಸ ಪ್ರಧಾನಿ ಆಯ್ಕೆ: ಜೈರಾಮ್ ರಮೇಶ್

ಪಿಟಿಐ
Published 30 ಮೇ 2024, 4:54 IST
Last Updated 30 ಮೇ 2024, 4:54 IST
<div class="paragraphs"><p>ಜೈರಾಮ್ ರಮೇಶ್</p></div>

ಜೈರಾಮ್ ರಮೇಶ್

   

– ಪಿಟಿಐ

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ನಿರ್ಣಾಯಕ ಜನಾಭಿಪ್ರಾಯ ಪಡೆಯಲಿದ್ದು, 48 ಗಂಟೆಯಲ್ಲಿ ‍ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ADVERTISEMENT

ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಪಕ್ಷ ಸ್ವಾಭಾವಿಕವಾಗಿ ನಾಯಕತ್ವ ವಹಿಸಿಕೊಳ್ಳುತ್ತದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಇಂಡಿಯಾ ಮೈತ್ರಿಕೂಟವು ಸರಳ ಬಹುಮತಕ್ಕೆ ಅಗತ್ಯ ಇರುವ 272ಕ್ಕಿಂತ ಅಧಿಕ ಸೀಟುಗಳಲ್ಲಿ ಗೆಲುವು ಸಾಧಿಸಲಿದೆ. ಇಂಡಿಯಾ ಒಕ್ಕೂಟದ ಪಕ್ಷದ ಪರವಾಗಿ ಜನಾಭಿಪ್ರಾಯ ಇರಲಿದೆ. ಎನ್‌ಡಿಎ ಮೈತ್ರಿಕೂಟದ ಕೆಲವೊಂದು ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. ಅವರನ್ನು ಸೇರಿಸುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಹೇಳಿದರು.

‘ನಾವು ದೊಡ್ಡ ವಿಜಯ ಗಳಿಸಲಿದ್ದೇವೆ. ನಮ್ಮಲ್ಲಿ ಸೇಡಿನ ರಾಜಕಾರಣವಿಲ್ಲ. ಭಾರತ ಪ್ರಕಾಶಿಸುತ್ತಿದೆ ಎಂದು 2004ರಲ್ಲಿ ಬಿಜೆಪಿ ಪ್ರಚಾರ ಮಾಡಿದರೂ, ಕಾಂಗ್ರೆಸ್ ಗೆಲುವು ಸಾಧಿಸಿ ಮೈತ್ರಿ ಸರ್ಕಾರ ರಚಿಸಿತ್ತು. 2024ರಲ್ಲಿ ಅದೇ ಪುನರಾವರ್ತನೆಯಾಗಲಿದೆ. ರಾಜಸ್ಥಾನ, ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನ ಸೀಟುಗಳಿಕೆ ಹೆಚ್ಚಳವಾಗಲಿದೆ. ಛತ್ತೀಸಗಢ, ಮಧ್ಯಪ್ರದೇಶ ಹಾಗೂ ಅಸ್ಸಾಂನಲ್ಲಿ ನಮ್ಮ ಪ್ರದರ್ಶನ ಉತ್ತಮವಾಗಿರಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಸೀಟು ಗಳಿಕೆ ಹೆಚ್ಚಳವಾಗಲಿದೆ ಎಂದ ಅವರು, ಬಿಜೆಪಿ 2019ರಲ್ಲಿ ಗಳಿಸಿದ್ದಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲ್ಲಲಿದೆ. ಪಶ್ಚಿಮ ಬಂಗಾಳದಲ್ಲೂ ಅವರ ಗಳಿಕೆ ಕಡಿಮೆಯಾಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.