ನವದೆಹಲಿ: ದೇಶದಲ್ಲಿ ಕೋವಿಡ್–19 ದೃಢಪಟ್ಟ 288 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.
ಸಚಿವಾಲಯ ಇಂದು ಬೆಳಗ್ಗೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಒಂದೇ ದಿನ 288 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,970ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಂಕಿನಿಂದ ಇಲ್ಲಿಯವರೆಗೆ 5,33,318 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ದಾಖಲಾಗಿರುವ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ. ಸೋಂಕಿನಿಂದ ವಾಸಿಯಾದವರ ಸಂಖ್ಯೆ 4,44,70,076. ರಾಷ್ಟ್ರೀಯ ಚೇತರಿಕಾ ಪ್ರಮಾಣವು ಶೇ 98.81ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ’ ಎಂದು ಅದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.