ADVERTISEMENT

India Covid Updates: 13,615 ಹೊಸ ಪ್ರಕರಣ, 20 ಸಾವು

ಪಿಟಿಐ
Published 12 ಜುಲೈ 2022, 7:19 IST
Last Updated 12 ಜುಲೈ 2022, 7:19 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟ 13,615 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,31,043ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 20 ಮಂದಿ ಸೋಂಕಿತರು ಸುನೀಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,474ಕ್ಕೆ ಏರಿದೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.30 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.50 ರಷ್ಟಿದೆ.

ADVERTISEMENT

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 3.23 ರಷ್ಟಿದ್ದು, ವಾರದ ಕೋವಿಡ್ ದೃಢ ಪ್ರಮಾಣ ಶೇಕಡ 4.24 ರಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.