ನವದೆಹಲಿ: ಭಾರತದಲ್ಲಿ 94.50 ಕೋಟಿಗೂ ಅಧಿಕ ಮತದಾರರು ಇದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಚುನಾವಣಾ ಆಯೋಗದ ದತ್ತಾಂಶವನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ಈ ಮಾಹಿತಿ ನೀಡಿದೆ.
ಈ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ‘ಭಾರತೀಯ ಚುನಾವಣಾ ಆಯೋಗದ ಪ್ರಕಾರ, 2023ರ ಜನವರಿ 1ರ ವೇಳೆಗೆ ಮತದಾರರ ಪಟ್ಟಿಯಲ್ಲಿ 94,50,25,694 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ‘ ಎಂದು ಹೇಳಿದ್ದಾರೆ.
1951ರಲ್ಲಿ ಸುಮಾರು 17.32 ಕೋಟಿ ಮತದಾರರು ಇದ್ದರು. 1957ಕ್ಕೆ ಇದು 19.37 ಕೋಟಿಗೆ ಏರಿಕೆಯಾಗಿತ್ತು. 2019ರ ಲೋಕಸಭೆ ಚುನಾವಣೆ ವೇಳೆ 91.20 ಮತದಾರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.