ADVERTISEMENT

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ: ರಾಹುಲ್ ಗಾಂಧಿ

ಪಿಟಿಐ
Published 11 ಮಾರ್ಚ್ 2021, 13:50 IST
Last Updated 11 ಮಾರ್ಚ್ 2021, 13:50 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಎಂದು ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿಕೆ ನೀಡಿದ್ದಾರೆ.

ಸ್ವೀಡನ್ ಸಂಸ್ಥೆಯೊಂದರ ಪ್ರಜಾಪ್ರಭುತ್ವ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದರು.

ಭಾರತ ಈಗ ಪಾಕಿಸ್ತಾನದಂತೆ ಸರ್ವಾಧಿಕಾರ ರಾಷ್ಟ್ರವಾಗಿದ್ದು, ಬಾಂಗ್ಲಾದೇಶಕ್ಕಿಂತಲೂ ಹದಗೆಟ್ಟಿದೆ ಎಂಬ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡಿದ್ದಾರೆ.

ಇತ್ತೀಚೆಗಷ್ಟೇ ಅಮೆರಿಕ ಮೂಲದ ಫ್ರೀಡಂ ಹೌಸ್ ಬಿಡುಗಡೆ ಮಾಡಿರುವ ನಾಗರಿಕ ಸ್ವಾತಂತ್ರ್ಯ ಅಧ್ಯಯನ ವರದಿಯಲ್ಲಿ ಪ್ರಜಾಪ್ರಭುತ್ವ ರಾಷ್ಟ್ರಗಳ ಪೈಕಿ ಭಾರತದ ಶ್ರೇಯಾಂಕ ಗಣನೀಯವಾಗಿ ಇಳಿಕೆ ಕಂಡಿತ್ತು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ನಾಗರಿಕ ಹಕ್ಕುಗಳು ನಶಿಸುತ್ತಿವೆ ಎಂದು ಫ್ರೀಡಂ ಹೌಸ್ ವರದಿಯು ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.