ADVERTISEMENT

ರಕ್ಷಣಾ ಸಾಮಗ್ರಿ ರಫ್ತು: 25 ದೇಶಗಳ ಪಟ್ಟಿಯಲ್ಲಿ ಭಾರತ–ಅಜಯ್‌ ಭಟ್

ಪಿಟಿಐ
Published 28 ಜನವರಿ 2024, 16:12 IST
Last Updated 28 ಜನವರಿ 2024, 16:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನಾಗ್ಪುರ: ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ 25 ಅಗ್ರ ದೇಶಗಳ ಪಟ್ಟಿಯಲ್ಲಿ ಭಾರತವು ಇದೇ ಮೊದಲ ಬಾರಿಗೆ ಸ್ಥಾನ ಪಡೆದಿದೆ ಎಂದು ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್‌ ಭಟ್ ಭಾನುವಾರ ಹೇಳಿದ್ದಾರೆ.

ನಾಗ್ಪುರದಲ್ಲಿ ಹಮ್ಮಿಕೊಂಡಿದ್ದ ‘ಅಡ್ಜಾಂಟೇಜ್ ವಿದರ್ಭ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ಷಣಾ ಸಾಮಗ್ರಿಗಳ ತಯಾರಿಕೆಯಲ್ಲಿ ದೇಶವು ಸ್ವಾವಲಂಬಿಯಾಗುತ್ತಿದೆ ಎಂದಿದ್ದಾರೆ.

ADVERTISEMENT

2017–18ನೇ ಸಾಲಿನಲ್ಲಿ ₹4,682 ಕೋಟಿ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಿದ್ದು,  2022–23ನೇ ಸಾಲಿನಲ್ಲಿ ₹15,916 ಕೋಟಿ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.