ADVERTISEMENT

ಮುಂಗಾರು: ವಾಡಿಕೆಯಂತೆ ಮಳೆ–ಐಎಂಡಿ ಮುನ್ಸೂಚನೆ

ಪಿಟಿಐ
Published 14 ಏಪ್ರಿಲ್ 2022, 11:04 IST
Last Updated 14 ಏಪ್ರಿಲ್ 2022, 11:04 IST
ಮುಂಗಾರು (ಸಾಂದರ್ಭಿಕ ಚಿತ್ರ)
ಮುಂಗಾರು (ಸಾಂದರ್ಭಿಕ ಚಿತ್ರ)   

ನವದೆಹಲಿ: ಈ ಬಾರಿಯ ನೈರುತ್ಯ ಮುಂಗಾರು ವಾಡಿಕೆಯಂತೆ ಇರಲಿದ್ದು, ಉತ್ತರ ಭಾರತದ ಕೆಲವೆಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.

ದೇಶದ ಮಧ್ಯ ಭಾಗ, ಹಿಮಾಲಯದ ತಪ್ಪಲಿನಲ್ಲಿ ಹಾಗೂ ವಾಯವ್ಯ ಭಾಗದಲ್ಲಿ ಸಹ ವಾಡಿಕೆಗಿಂತ ಹೆಚ್ಚು ಮಳೆ ಬೀಳುವುದು. ದೇಶದ ಈಶಾನ್ಯ ಹಾಗೂ ವಾಯವ್ಯ ಭಾಗದ ಕೆಲ ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

1971–2020ವರೆಗಿನ ದೀರ್ಘಾವಧಿ ಸರಾಸರಿ (ಎಲ್‌ಪಿಎ) ಮಳೆ 87 ಸೆಂ.ಮೀ. ಇದೆ. ಈ ಬಾರಿ ಈ ಎಲ್‌ಪಿಎದ ಶೇ 96ರಿಂದ 104ರಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಈ ಮೊದಲು 1961ರಿಂದ2010ರ ವರೆಗಿನ ಎಲ್‌ಪಿಎ 88 ಸೆಂ.ಮೀ. ಅನ್ನು ಮಾನದಂಡವಾಗಿ ಇಲಾಖೆ ಪರಿಗಣಿಸುತ್ತಿತ್ತು.

ADVERTISEMENT

ಈ ಹಿಂದಿನ ಮೂರು ವರ್ಷಗಳ ಮುಂಗಾರು ಅವಧಿಯಲ್ಲಿ ವಾಡಿಕೆಯಂತೆ ಮಳೆಯಾಗಿದೆ. ಈ ಬಾರಿಯೂ ವಾಡಿಕೆಯಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ, ಮೇ ಅಂತ್ಯದಲ್ಲಿ ಮತ್ತೊಮ್ಮೆ ನೈರುತ್ಯ ಮಾರುತಗಳ ಪ್ರವೇಶ ಹಾಗೂ ಸಂಭಾವ್ಯ ಮಳೆ ಪ್ರಮಾಣ ಕುರಿತು ಮಾಹಿತಿ ನೀಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.