ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ.
ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ.
ಮೃತಪಟ್ಟ ಮೂವರು ಕೇರಳ ರಾಜ್ಯದವರು. ಈವರೆಗೆ 5,33,321 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ ಕೋವಿಡ್ ಮರಣ ಪ್ರಮಾಣ ಶೇ 1.19ರಷ್ಟಿದೆ.
ದೇಶದಲ್ಲಿ ಇದುವರೆಗೆ 4.50 ಕೋಟಿ ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಈವರೆಗೆ ಒಟ್ಟು 4,44,70,346 ಮಂದಿ ಗುಣಮುಖರಾಗಿದ್ದಾರೆ.
ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.81 ಆಗಿದೆ.
ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.