ನವದೆಹಲಿ: ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಇಂದು ರಾತ್ರಿ 8 ಗಂಟೆಗೆ ಸಭೆ ನಡೆಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ. ಇಂಡಿಯಾ ಮೈತ್ರಿಕೂಟವು ಕಾಂಗ್ರೆಸ್ ಸಂಸದ ಕೊಡಿಕುನ್ನಿಲ್ ಸುರೇಶ್ ಅವರನ್ನು ಕಣಕ್ಕಿಳಿಸಲಾಗಿದೆ.
ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ನಾಳೆ (ಬುಧವಾರ) ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಮತದಾನ ನಡೆಯಲಿದೆ.
ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭಾ ಸದಸ್ಯರಾಗಿ ಬಿರ್ಲಾ ಆಯ್ಕೆಯಾಗಿದ್ದಾರೆ. ಇತ್ತ ಸುರೇಶ್ ಅವರು ಕೇರಳದಿಂದ 7ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.