ADVERTISEMENT

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರೈಲ್ವೆ ಹುದ್ದೆಗೆ ವಿನೇಶ್ ಫೋಗಟ್ ರಾಜೀನಾಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಸೆಪ್ಟೆಂಬರ್ 2024, 9:10 IST
Last Updated 6 ಸೆಪ್ಟೆಂಬರ್ 2024, 9:10 IST
<div class="paragraphs"><p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ&nbsp;ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ</p></div>

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ

   

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆನ್ನಲ್ಲೇ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ರೈಲ್ವೆ ಹುದ್ದೆಗೆ ಇಂದು (ಶುಕ್ರವಾರ) ರಾಜೀನಾಮೆ ನೀಡಿದ್ದಾರೆ.

ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಗುಳಿಯಲು ನಿರ್ಧರಿಸಿದ್ದು, ಅಧಿಕಾರಿಗಳಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಎಂದೆಂದಿಗೂ ಚಿರಋಣಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪುನಿಯಾ ಮತ್ತು ವಿನೇಶ್ ಇಬ್ಬರೂ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ. ಆದರೆ, ಅವರಲ್ಲಿ ಒಬ್ಬರು ಸ್ಪರ್ಧಿಸುತ್ತಾರೆಯೇ ಅಥವಾ ಇಬ್ಬರೂ ಸ್ಪರ್ಧಿಸುತ್ತಾರೆಯೇ ಎಂಬುದು ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇತ್ತ ವಿನೇಶ್‌ ಸ್ಪರ್ಧೆ ಕುರಿತ ಬೆಳವಣಿಗೆಯನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಕಾಂಗ್ರೆಸ್ ಒಂದು ವೇಳೆ ವಿನೇಶ್‌ ಅವರನ್ನು ಕಣಕ್ಕಿಳಿಸಿದರೆ, ಅವರಿಗೆ ಎದುರಾಳಿಯಾಗಿ ವಿನೇಶ್‌ ಸಂಬಂಧಿಯೇ ಆಗಿರುವ ಬಬಿತಾ ಫೋಗಟ್ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.