ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಕೋವಿಡ್ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,46,76,879 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,30,691 ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ 4,41,42,791 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಾದ್ಯಂತ 3,397 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 0.15 ರಷ್ಟಿದರೆ, ಚೇತರಿಕೆ ಪ್ರಮಾಣ ಶೇ 988.8 ರಷ್ಟಿದೆ.
ದೇಶದಲ್ಲಿ ಈವರೆಗೆ 220.04 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.