ADVERTISEMENT

Covid-19: ಭಾರತದಲ್ಲಿ 797 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಪಿಟಿಐ
Published 29 ಡಿಸೆಂಬರ್ 2023, 8:11 IST
Last Updated 29 ಡಿಸೆಂಬರ್ 2023, 8:11 IST
<div class="paragraphs"><p>ಕೋವಿಡ್ ಪರೀಕ್ಷೆ&nbsp;</p></div>

ಕೋವಿಡ್ ಪರೀಕ್ಷೆ 

   

(ಸಂಗ್ರಹ ಚಿತ್ರ)

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಇದು 225 ದಿನಗಳಲ್ಲಿ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ADVERTISEMENT

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಇಬ್ಬರು, ಮಹಾರಾಷ್ಟ್ರ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಸೇರಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೇ 19ರಂದು ದೇಶದಲ್ಲಿ 865 ಹೊಸ ಪ್ರಕರಣಗಳು ದಾಖಲಾಗಿದ್ದವು. ಅಲ್ಲಿಂದ ಡಿಸೆಂಬರ್ 5 ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗೆ ಇಳಿದಿತ್ತು. ಆದರೆ ಈಗ ಮತ್ತೆ ಹೆಚ್ಚಿವೆ.

ಕೋವಿಡ್‌ ಆರಂಭವಾದಾಗಿನಿಂದ ಸುಮಾರು 4 ವರ್ಷಗಳಲ್ಲಿ ದೇಶಾದ್ಯಂತ 4.5 ಕೋಟಿಗೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿದೆ. 5.3 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಚೇತರಿಕೆ ದರ 98.81 ಪ್ರತಿಶತದಷ್ಟಿದೆ. ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.