ADVERTISEMENT

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ತಿರಸ್ಕರಿಸಿದ ಭಾರತ

ಪಿಟಿಐ
Published 15 ಅಕ್ಟೋಬರ್ 2024, 11:11 IST
Last Updated 15 ಅಕ್ಟೋಬರ್ 2024, 11:11 IST
<div class="paragraphs"><p>ಜಸ್ಟಿನ್ ಟ್ರುಡೊ, ನರೇಂದ್ರ ಮೋದಿ</p></div>

ಜಸ್ಟಿನ್ ಟ್ರುಡೊ, ನರೇಂದ್ರ ಮೋದಿ

   

(ರಾಯಿಟರ್ಸ್ ಚಿತ್ರ)

ನವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಕೆನಡಾದ ಆರೋಪಗಳನ್ನು ಭಾರತ ಇಂದು (ಮಂಗಳವಾರ) ತಳ್ಳಿ ಹಾಕಿದೆ.

ADVERTISEMENT

ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತಕ್ಕೆ ಸಾಕ್ಷ್ಮಗಳನ್ನು ಹಂಚಿಕೊಳ್ಳಲಾಗಿದೆ ಎಂಬ ಕೆನಡಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ.

'ತನ್ನ ನೆಲದಲ್ಲಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆಗಳನ್ನು ನಡೆಸುವ ಚಟುವಟಿಕೆಗಳಲ್ಲಿ ಭಾರತ ತೊಡಗಿಸಿಕೊಂಡಿದೆ' ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪ ಮಾಡಿದ್ದರು. ಆದರೆ ಇದು ಸತ್ಯವಲ್ಲ ಎಂದು ಭಾರತ ತಿರುಗೇಟು ನೀಡಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಏಜೆಂಟರ ಪಾತ್ರ ಇರುವುದನ್ನು ಸಾಬೀತುಪಡಿಸುವ ನಂಬಲರ್ಹ ಪುರಾವೆಗಳನ್ನು ಒದಗಿಸಲಾಗಿದೆ ಎಂಬ ಕೆನಡಾದ ಅಧಿಕಾರಿಗಳ ಆರೋಪಗಳನ್ನು ಭಾರತ ನಿರಾಕರಿಸಿರುವುದಾಗಿ ಮೂಲಗಳು ತಿಳಿಸಿವೆ.

ಪತ್ರಿಕಾಗೋಷ್ಠಿಯಲ್ಲಿ ಅದೇ ಹಳೆಯ ಟ್ರುಡೊ, ಮತ್ತದೇ ಹಳೆಯ ಕಾರಣಗಳನ್ನು ನೀಡುತ್ತಿದ್ದರು ಎಂದು ಹೇಳಿವೆ.

ಕೆನಡಾದಲ್ಲಿರುವ ತನ್ನ ಹೈಕಮಿಷನರ್‌ ಅವರನ್ನು ಸೋಮವಾರ ಭಾರತ ವಾಪಸ್‌ ಕರೆಸಿಕೊಳ್ಳುವುದರೊಂದಿಗೆ ಉಭಯ ದೇಶಗಳ ನಡುವಣ ರಾಜತಾಂತ್ರಿಕ ಸಂಬಂಧದಲ್ಲಿ ಮತ್ತಷ್ಟು ಬಿರುಕು ಮೂಡಿತ್ತು. ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್‌ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಹೇಳಿತ್ತು. ಇದರ ಬೆನ್ನಲ್ಲೇ ಭಾರತ ಈ ನಿರ್ಧಾರ ತೆಗೆದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.