ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 12,194 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 92 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,09,04,940 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,55,642 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,06,11,731 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,37,567 ಸಕ್ರಿಯ ಪ್ರಕರಣಗಳಿವೆ.
ಕೇರಳದಲ್ಲಿ 63,847, ಮಹಾರಾಷ್ಟ್ರದಲ್ಲಿ 34,449, ಕರ್ನಾಟಕದಲ್ಲಿ 5,929, ತಮಿಳುನಾಡಿನಲ್ಲಿ 4,275, ಪಶ್ಚಿಮ ಬಂಗಾಳದಲ್ಲಿ 4,160 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಇದುವರೆಗೆ 82,63,858 ಮಂದಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.