ನವದೆಹಲಿ: ದೇಶದಲ್ಲಿ ಹೊಸದಾಗಿ 2.11 ಲಕ್ಷ ಕೋವಿಡ್–19 ಪ್ರಕರಣಗಳು ಪತ್ತೆಯಾಗಿವೆ. ಜತೆಗೆ, 3,847 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ, ಇದುವರೆಗೆ ಸಾವಿಗೀಡಾದವರ ಸಂಖ್ಯೆ 3.15 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಬುಧವಾರ 21.57 ಲಕ್ಷ ಕೋವಿಡ್–19 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ, ಇದುವರೆಗೆ ಕೈಗೊಂಡ ಪರೀಕ್ಷೆಗಳ ಸಂಖ್ಯೆ 33.69 ಕೋಟಿ ದಾಟಿದೆ.
ಪಾಸಿಟಿವಿಟಿ ದರ ಶೇಕಡ 9.79 ದಾಖಲಾಗಿದೆ. ಸತತ ಮೂರು ದಿನಗಳಿಂದ ಶೇಕಡ 10ಕ್ಕಿಂತ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 24.19 ಲಕ್ಷಕ್ಕೆ ಇಳಿಕೆಯಾಗಿದೆ. ಇದು ಒಟ್ಟು ಸೋಂಕು ಪ್ರಕರಣಗಳಲ್ಲಿನ ಶೇಕಡ 8.84ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಇದುವರೆಗೆ 2.46 ಕೋಟಿ ಮಂದಿ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.