ನವದೆಹಲಿ: ದೇಶದಲ್ಲಿ ಸತತ ನಾಲ್ಕನೇ ದಿನವೂ 2 ಲಕ್ಷಕ್ಕಿಂತ ಹೆಚ್ಚು ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 1,47,88,109 ಕ್ಕೆತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ವೇಳೆ 1,501 ಸೋಂಕಿತರು ಮೃತಪಟ್ಟಿದ್ದಾರೆ. 1,38,423 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ ಒಟ್ಟು 1,28,09,643 ಸೋಂಕಿತರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 1,77,150ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 18,01,316 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಈವರೆಗೆ ಒಟ್ಟು 12,26,22,590 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.