ADVERTISEMENT

Covid-19 India Update: 3.23 ಲಕ್ಷ ಹೊಸ ಪ್ರಕರಣ, 2,771 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2021, 5:07 IST
Last Updated 27 ಏಪ್ರಿಲ್ 2021, 5:07 IST
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,23,144 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 2,771 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ. ಆ ಪೈಕಿ 1,97,894 ಮಂದಿ ಸಾವಿಗೀಡಾಗಿದ್ದಾರೆ.

ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 1,45,56,209 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 28,82,204 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಮಹಾರಾಷ್ಟ್ರದಲ್ಲಿ 6,76,647, ಉತ್ತರಪ್ರದೇಶ 3,04,199, ಕರ್ನಾಟಕ 2,81,061, ಕೇರಳ 2,33,140, ರಾಜಸ್ಥಾನ 1,46,640, ಗುಜರಾತ್‌ 1,21,461, ಛತ್ತೀಸ್‌ಗಡ 1,21,352, ತಮಿಳುನಾಡಿನಲ್ಲಿ 1,07,145 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಇದುವರೆಗೆ 14,52,71,186 ಡೋಸ್‌ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸೋಮವಾರ 16,58,700 ಸೇರಿದಂತೆ ಇದುವರೆಗೆ ಒಟ್ಟು 28,09,79,877 ಜನರಿಗೆ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.