ADVERTISEMENT

Covid-19 India Update: ದೇಶದಲ್ಲಿ ಒಟ್ಟು 422 ಓಮೈಕ್ರಾನ್‌ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಡಿಸೆಂಬರ್ 2021, 4:17 IST
Last Updated 26 ಡಿಸೆಂಬರ್ 2021, 4:17 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗಾಗಿ ಮಹಿಳೆಯೊಬ್ಬರ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವ ಆರೋಗ್ಯ ಕಾರ್ಯಕರ್ತೆ
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗಾಗಿ ಮಹಿಳೆಯೊಬ್ಬರ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವ ಆರೋಗ್ಯ ಕಾರ್ಯಕರ್ತೆ   

ನವದೆಹಲಿ: ಭಾರತದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 6,987 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 162 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

24 ಗಂಟೆಗಳಲ್ಲಿ 7,091 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 76,766 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 422ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಕನಿಷ್ಠ 130 ಮಂದಿ ಗುಣಮುಖರಾಗಿದ್ದಾರೆ.

ಈವರೆಗೂ ಕೊರೊನಾ ವೈರಸ್‌ ಸೋಂಕಿನಿಂದ 3,42,30,354 ಮಂದಿ ಚೇತರಿಸಿಕೊಂಡಿದ್ದು, 4,79,682 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ದೇಶದಾದ್ಯಂತ ಇಲ್ಲಿಯವರೆಗೂ 141.37 ಕೋಟಿ ಡೋಸ್‌ ಲಸಿಕೆ ವಿತರಣೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.