ನವದೆಹಲಿ: ದೇಶದಲ್ಲಿ ಇಂದು (ಶನಿವಾರ) 743 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ಏರಿಕೆಯಾಗಿದೆ. ಜತೆಗೆ ಕೇರಳದಲ್ಲಿ 3, ಕರ್ನಾಟಕದಲ್ಲಿ 2, ಛತ್ತೀಸಗಢ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ.
ಕೋವಿಡ್ ಆರಂಭವಾದಾಗಿನಿಂದ ದೇಶದಲ್ಲಿ ದಾಖಲಾಗಿದ್ದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಕೋಟಿಯಾಗಿದ್ದು, 4.44 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆ ಪ್ರಮಾಣ ಶೇ 98.81ರಷ್ಟಿದೆ. ಒಟ್ಟು 5,33 ಲಕ್ಷ ಜನರು ಮೃತಪಟ್ಟಿದ್ದು, ಸಾವಿನ ಪ್ರಮಾಣ ಶೇ 1.19ರಷ್ಟಿದೆ.
ದೇಶದಲ್ಲಿ ಇದುವರೆಗೆ 220.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.