ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 8,822 ಹೊಸ ಪ್ರಕರಣಗಳು ದಾಖಲಾಗಿದ್ದು, 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಹೀಗಾಗಿ, ಸೋಂಕಿತರ ಒಟ್ಟು ಸಂಖ್ಯೆ 4,32,45,517ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 53,637ಕ್ಕೆ ಜಿಗಿದಿದೆ.
ಕೋವಿಡ್‌ನಿಂದ ಮೃತರ ಒಟ್ಟು ಸಂಖ್ಯೆ 5,24,792 ರಷ್ಟಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇಕಡ 0.12 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.66 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 3,089 ರಷ್ಟು ಹೆಚ್ಚಾಗಿವೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 2 ಮತ್ತು ವಾರದ ಪಾಸಿಟಿವಿಟಿ ದರ ಶೇಕಡ 2.35ರಷ್ಟಿದೆ.
ಈವರೆಗೆ ದೇಶದಲ್ಲಿ 195.5 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.