ನವದೆಹಲಿ: ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನಾಚರಣೆ ಪ್ರಯುಕ್ತ ಭಾರತ ವಿಶೇಷ ಪುಸ್ತಕ ಮಳಿಗೆಯನ್ನುವಿಶ್ವಪ್ರಸಿದ್ಧ ಲಂಡನ್ ಪುಸ್ತಕ ಮೇಳದಲ್ಲಿ ಹಾಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಮಳಿಗೆಯನ್ನು ಮಂಗಳವಾರಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಕ್ರಮ್ ಸಹಾಯ್ ಮತ್ತು ನಿರ್ದೇಶನಾಲಯದ ಪ್ರಧಾನ ಕಾರ್ಯದರ್ಶಿ ಸಾಧನಾ ರಾವತ್ ಉದ್ಘಾಟಿಸಿದರು.
ಲಂಡನ್ ಪುಸ್ತಕಮೇಳ ಮಾರ್ಚ್ 12ರಂದು ಆರಂಭಗೊಂಡಿದ್ದು, ಮಾರ್ಚ್ 14ರ ವರೆಗೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.