ADVERTISEMENT

ದಕ್ಷಿಣ ಆಫ್ರಿಕಾದಿಂದ 12 ಚೀತಾ ಭಾರತಕ್ಕೆ

ಪಿಟಿಐ
Published 27 ಜನವರಿ 2023, 7:36 IST
Last Updated 27 ಜನವರಿ 2023, 7:36 IST
(ಸಂಗ್ರಹ ಚಿತ್ರ)
(ಸಂಗ್ರಹ ಚಿತ್ರ)   

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 12 ಚೀತಾಗಳನ್ನು ಕರೆ ತರುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

ಫೆಬ್ರುವರಿ 12ರ ಮುಂಚಿತವಾಗಿ ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕರೆ ತರುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆರು ತಿಂಗಳಿಗೂ ಹೆಚ್ಚು ಸಮಯದಿಂದ ಕ್ವಾರಂಟೈನ್‌ನಲ್ಲಿರುವ ಚೀತಾಗಳು, ಇದೇ ತಿಂಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ದಕ್ಷಿಣ ಆಫ್ರಿಕಾದಲ್ಲಿ ಪ್ರಕ್ರಿಯೆ ವಿಳಂಬಗೊಂಡಿದ್ದರಿಂದ ಹಸ್ತಾಂತರ ವಿಳಂಬಗೊಂಡಿತು ಎಂದು ಹೇಳಿದ್ದಾರೆ.

ಕಳೆದ ವರ್ಷ (ಸೆ.17) ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ನಮೀಬಿಯಾದಿಂದ ಎಂಟು ಚೀತಾಗಳನ್ನು ಕರೆತರಲಾಗಿತ್ತು.

ಚೀತಾವನ್ನು ಭಾರತದ ಅರಣ್ಯಕ್ಕೆ ಮರುಪರಿಚಯಿಸುವ ಉದ್ದೇಶದೊಂದಿಗೆ ಆಫ್ರಿಕಾದಿಂದ ಚೀತಾಗಳನ್ನು ಹಂತ ಹಂತವಾಗಿ ಕರೆ ತರಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.