ನವದೆಹಲಿ: ರಷ್ಯಾದ ಮಾಸ್ಕೋದಲ್ಲಿ ಉಗ್ರರು ನಡೆಸಿದ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಾವು ಸಂತ್ರಸ್ತ ಕುಟುಂಬದ ಜೊತೆ ಇದ್ದೇವೆ. ಈ ದುಃಖದ ಸಮಯದಲ್ಲಿ ಭಾರತ ಸರ್ಕಾರ ರಷ್ಯಾ ಜನರೊಂದಿಗೆ ನಿಲ್ಲುತ್ತದೆ ಎಂದು ಪ್ರಧಾನಿ ಮೋದಿ Xನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾಸ್ಕೋದ ಅತೀ ದೊಡ್ಡ ಒಳಾಂಗಣ ಸಭಾಂಗಣವಾದ ಕ್ರಾಕಸ್ ಸಿಟಿ ಹಾಲ್‌ಗೆ (Crocus City Hall) ನುಗ್ಗಿದ ಶಸ್ತ್ರಸಜ್ಜಿತ ಉಗ್ರರ ಗುಂಡಿನ ದಾಳಿಯಿಂದ 60 ಜನ ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕ್ರಾಕಸ್ ಸಿಟಿ ಹಾಲ್‌ನಲ್ಲಿ ಶುಕ್ರವಾರ ರಾತ್ರಿ ಸಂಗೀತ ಕಛೇರಿ ನಡೆಯುತ್ತಿತ್ತು. ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಈ ವೇಳೆ ಏಕಾಏಕಿ ಹಾಲ್ ಒಳಗೆ ನುಗ್ಗಿದ ಉಗ್ರರು ಮನಸೋಇಚ್ಚೆ ಗುಂಡು ಹಾರಿಸಿ ಅಮಾಯಕರನ್ನು ಹತ್ಯೆ ಮಾಡಿದ್ದಾರೆ. ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.