ನ್ಯೂಯಾರ್ಕ್: ಬಡತನ ನಿರ್ಮೂಲನೆ ಮಾಡುವ ಪ್ರಯತ್ನದಲ್ಲಿ ಭಾರತ ಕೈಗೊಂಡಿರುವ ಕ್ರಮಗಳು ಜಗತ್ತಿಗೆ ಮಾದರಿಯಾಗಿವೆ ಎಂದುಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 73ನೇ ಅಧಿವೇಶನದಲ್ಲಿ ವಿಶ್ವದ ವಿವಿಧ ರಾಷ್ಟ್ರಗಳ ನಾಯಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಲಕ್ಷಾಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿರುವ ಭಾರತದ ಪ್ರಯತ್ನ ಶ್ಲಾಘನೀಯ ಎಂದರು. ಬಡತನ ನಿರ್ಮೂಲನೆಗಾಗಿ ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳು ಮತ್ತು ಇಲ್ಲಿನ ಸಾಮಾಜಿಕ ವ್ಯವಸ್ಥೆಯ ಬಗ್ಗೆ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲಕ್ಕೆತ್ತಲು ಅಲ್ಲಿನ ಸರ್ಕಾರಗಳು ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿವೆ. ಇದರ ಫಲವಾಗಿ ಬಡತನದಲ್ಲಿದ್ದ ಲಕ್ಷಾಂತರ ಜನರು ಇಂದು ಮಧ್ಯಮವರ್ಗದ ಜನರಾಗಿ ಬದಲಾಗಿದ್ದಾರೆ ಎಂದು ಟ್ರಂಪ್ ಹೇಳಿದರು.
35 ನಿಮಿಷ ಭಾಷಣ ಮಾಡಿದ ಟ್ರಂಪ್ ಜಾಗತಿಕವಾಗಿ ಬಡತನ ನಿರ್ಮೂಲನೆ ಮತ್ತು ಶಿಕ್ಷಣ ಕುರಿತಂತೆ ಮಾತನಾಡಿದರು. ಮುಂದಿನ ಪೀಳಿಗೆಗೆ ಜಗತನ್ನು ಹೇಗೆ ಉಳಿಸಿಕೊಡಬೇಕು ಎಂಬುದನ್ನು ನಾವು ಯೋಚಿಸಬೇಕಾಗಿದೆ ಎಂದು ಟ್ರಂಪ್ ಒತ್ತಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.