ADVERTISEMENT

ಸ್ವದೇಶಿ ನಿರ್ಮಿತ ‘ಬ್ರಹ್ಮೋಸ್‌’ ಕ್ಷಿಪಣಿ ಪರೀಕ್ಷೆ ಯಶಸ್ವಿ

ಪಿಟಿಐ
Published 20 ಜನವರಿ 2022, 11:15 IST
Last Updated 20 ಜನವರಿ 2022, 11:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಲಸೋರ್‌, ಒಡಿಶಾ: ಸ್ವದೇಶಿ ನಿರ್ಮಿತ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಗುರುವಾರ ಯಶಸ್ವಿಯಾಗಿ ನಡೆಯಿತು.

‘ಒಡಿಶಾ ಕರಾವಳಿಯ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ಐಟಿಆರ್‌) ಈ ಪರೀಕ್ಷೆ ನಡೆಸಲಾಯಿತು’ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮೂಲಗಳು ತಿಳಿಸಿವೆ.

‘ನಿಯಂತ್ರಣ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಈ ಕ್ಷಿಪಣಿಯಲ್ಲಿ ಅಳವಡಿಸಲಾಗಿದೆ. ಕ್ಷಿಪಣಿ ಪರೀಕ್ಷೆಗೆ ಸಂಬಂಧಿಸಿದ ದತ್ತಾಂಶಗಳ ವಿಶ್ಲೇಷಣಾ ಕಾರ್ಯ ನಡೆಯುತ್ತಿದೆ’ ಎಂದು ಇವೇ ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.