ಬಾಲೇಶ್ವರ(ಒಡಿಶಾ): ದೇಶದ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುವ ಉದ್ದೇಶದಿಂದ 300ರಿಂದ 500 ಕಿ.ಮೀ. ದೂರ ನೆಗೆಯಬಲ್ಲ ಖಂಡಾಂತರ ಕ್ಷಿಪಣಿ ‘ಪ್ರಳಯ್’ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿತು.
ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಎಒ) ಪರೀಕ್ಷೆ ನಡೆಸಿತು. ಬೆಳಗ್ಗೆ 9.50ರ ಸುಮಾರಿಗೆ ಉಡಾವಣೆಗೊಂಡ ಕ್ಷಿಪಣಿ ತನ್ನ ಉದ್ದೇಶಿತ ಗುರಿಯನ್ನು ತಲುಪಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಳಯ್ ಕ್ಷಿಪಣಿಯು ಪೇಲೋಡ್– ಸಿಡಿತಲೆ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದನ್ನು ದೇಶದ ಗಡಿಯುದ್ದಕ್ಕೂ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.