ರಾಂಚಿ: ಮೋದಿ ಸರ್ಕಾರವನ್ನು 'ಹೈ ಟೆನ್ಷನ್ ಲೈನ್'ಗೂ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರವನ್ನು ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ಗೆ ಹೋಲಿಕೆ ಮಾಡಿ ಜಾರ್ಖಂಡ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ಮತ ನೀಡಿದರೆ ಹಜಾರಿಬಾಗ್‌ನಲ್ಲಿ ಶಾಂತಿಯುತ ರಾಮನವಮಿ ಆಚರಣೆಯಲ್ಲಿ ಭಾಗವಹಿಸುವುದಾಗಿ ಶಾ ಜನರಿಗೆ ಮನವಿ ಮಾಡಿದರು. ಅವರು ಹಜಾರಿಬಾಗ್‌ನಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜೆಎಂಎಂ ನೇತೃತ್ವದ ಸರ್ಕಾರವು ಭೂ ವ್ಯವಹಾರಗಳು, ಗಣಿಗಾರಿಕೆ ಮತ್ತು ಮದ್ಯದ ಅಕ್ರಮದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಹಗರಣಗಳಲ್ಲಿ ಭಾಗಿಯಾಗಿದೆ ಎಂದು ಶಾ ಆರೋಪಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 2027ರ ಡಿಸೆಂಬರ್ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕೇಂದ್ರ ಕೊಡುವ ಉಚಿತ ಪಡಿತರವನ್ನು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ನುಂಗಿ ಹಾಕಿದೆ. ಹಾಗೇ ಮಾವೋವಾದಿಗಳು ಬೆಳೆಯಲು ಅವಕಾಶ ನೀಡುತ್ತಿದೆ ಎಂದು ಆರೋಪ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.