ADVERTISEMENT

ಈ ಬಾರಿ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ಸೆಕೆ– ಹವಾಮಾನ ಇಲಾಖೆ

ಪಿಟಿಐ
Published 1 ಮಾರ್ಚ್ 2024, 13:36 IST
Last Updated 1 ಮಾರ್ಚ್ 2024, 13:36 IST
ಬಿಸಿಲು
ಬಿಸಿಲು   

ನವದೆಹಲಿ: ಎಲ್‌–ನಿನೊ ಪರಿಣಾಮದಿಂದ ಈ ಬಾರಿ ಬೇಸಿಗೆಯ ಆರಂಭವೇ ಹೆಚ್ಚು ಸೆಕೆಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ. 

ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಉತ್ತರ ಒಳನಾಡು, ಮಹಾರಾಷ್ಟ್ರ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ  ತಾಪಮಾನ ಹೆಚ್ಚಿರಲಿದೆ ಎಂದು ಇಲಾಖೆ ಹೇಳಿದೆ.

ಮಾರ್ಚ್‌ನಲ್ಲಿ ಸೆಕೆಯ ಜತೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಉತ್ತರ ಮತ್ತು ಮಧ್ಯ ಭಾರತದಲ್ಲಿ ಮಾರ್ಚ್‌ನಲ್ಲಿ ಬಿಸಿಗಾಳಿ ಪರಿಸ್ಥಿತಿ ಇರುವ ಲಕ್ಷಣಗಳು ಕಡಿಮೆ ಇದೆ. 

ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಲ್‌–ನಿನೊ ಪರಿಣಾಮದಿಂದ ಮಧ್ಯ ಪೆಸಿಫಿಕ್‌ ಸಾಗರದಲ್ಲಿ ನೀರಿನ ಮೇಲ್ಮೈ ತಾಪಮಾನ ಬೇಸಿಗೆ ಮುಗಿಯುವವರೆಗೂ ಇರಲಿದೆ. ಬಳಿಕ ತಟಸ್ತವಾಗಲಿದೆ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.