ನವದೆಹಲಿ: ಪಾಕಿಸ್ತಾನದ ಉಗ್ರ ಶಿಬಿರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಸರಿ ಸುಮಾರು 200 ಉಗ್ರರು ಹತರಾಗಿದ್ದರೆ ಎಂದು ಹೇಳಲಾಗಿದೆ. ಪಾಕ್ ಮೇಲೆ ದಾಳಿ ನಡೆಸುವ ನಿರ್ಧಾರ ಪ್ರಧಾನಿ ನರೇಂದ್ರ ಮೋದಿಯದ್ದಾಗಿತ್ತು ಎಂದು ನ್ಯೂಸ್ 18 ವರದಿ ಮಾಡಿದೆ.
ಗಡಿ ನಿಯಂತ್ರಣ ರೇಖೆಯಾಚೆ ಇರುವ ಬಲಾಕೋಟ್, ಚಕೋತಿ ಮತ್ತು ಮುಜಾಫರ್‌ಬಾದ್‍ನಲ್ಲಿದ್ದ ಉಗ್ರರ ನೆಲೆಗಳು ವೈಮಾನಿಕ ದಾಳಿಯಲ್ಲಿ ಸಂಪೂರ್ಣ ನಾಶವಾಗಿದೆ.ಜೈಷೆ ಸಂಘಟವೆಯ ನಿಯಂತ್ರಣಾ ಕೊಠಡಿ ಕೂಡಾ ಧ್ವಂಸವಾಗಿದೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಾಳಿ ಬಗ್ಗೆ ಇಲ್ಲಿಯವರೆಗೆ ಕೇಂದ್ರ ಸರ್ಕಾರದ ಮೂಲಗಳು ಯಾವುದೇ ಮಾಹಿತಿ ನೀಡಿಲ್ಲ.
ಕೃಷಿ ಸಚಿವಾಲಯದ ರಾಜ್ಯ ಸಚಿವ ಗಜೇಂದ್ರ ಸಿಂಗ್ ಶೆಖಾವತ್ವೈಮಾನಿಕ ದಾಳಿ ಬಗ್ಗೆ ಟ್ವೀಟಿಸಿದ್ದು ಮೋದಿಯವರನ್ನು ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.