ADVERTISEMENT

ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ಕಾಪ್ಟರ್‌ ದುರಂತದ ತನಿಖೆ: ಸಚಿವ

ಪಿಟಿಐ
Published 9 ಡಿಸೆಂಬರ್ 2021, 6:51 IST
Last Updated 9 ಡಿಸೆಂಬರ್ 2021, 6:51 IST
ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌    

ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತದ ತನಿಖೆಗೆ ಭಾರತೀಯ ವಾಯುಪಡೆ (ಐಎಎಫ್) ಆದೇಶಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದರು.

ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಐಎಎಫ್ ತನಿಖಾ ತಂಡ ಬುಧವಾರ ವೆಲ್ಲಿಂಗ್ಟನ್ ತಲುಪಿದ್ದು, ಈಗಾಗಲೇ ತನಿಖೆ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಜನರಲ್ ರಾವತ್ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಸಂಸತ್ತಿಗೆ ತಿಳಿಸಿದ ರಾಜನಾಥ್, ಇತರ ಸೇನಾ ಸಿಬ್ಬಂದಿಯ ಅಂತಿಮ ಸಂಸ್ಕಾರವನ್ನು ಸೂಕ್ತ ಗೌರವದೊಂದಿಗೆ ನಡೆಸುವುದಾಗಿ ಹೇಳಿದರು.

ಬುಧವಾರ ನಡೆದ ಎಂಐ–17ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದರು. ಎಲ್ಲರ ನಿಧನಕ್ಕೆ ಲೋಕಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.